SUDDIKSHANA KANNADA NEWS/ DAVANAGERE/ DATE:21-02-2025
ದಾವಣಗೆರೆ: ಪ್ರವಾಸೋದ್ಯಮ ಇಲಾಖೆವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ ದಾವಣಗೆರೆ, ಇಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಫೆಬ್ರವರಿ 25 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ:08192-230123 ಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.