SUDDIKSHANA KANNADA NEWS/ DAVANAGERE/ DATE:29-08-2023
ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ:
BPL CARDಗೆ ಮಾನದಂಡವೇನು ಗೊತ್ತಾ…? ಎಷ್ಟು ಮಂದಿಗೆ ಬಂದಿಲ್ಲ ಅಕ್ಕಿ ದುಡ್ಡು…?
ಶ್ರಮ ಶಕ್ತಿ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ), ಗಂಗಾ ಕಲ್ಯಾಣ ಯೋಜನೆ, ಟ್ಯಾಕ್ಸಿ, ಗೂಡ್ಸ್, ಆಟೋರಿಕ್ಷಾ ವಾಹನ ಖರೀದಿಸಲು ಸಹಾಯಧನ ಯೋಜನೆ, ವೃತ್ತಿಪ್ರೋತ್ಸಾಹ ಯೋಜನೆ, ಅರಿವು ಸಿಇಟಿ, ನೀಟ್ ವಿದ್ಯಾಭ್ಯಾಸ ಸಾಲ ಯೋಜನೆ ನವೀಕರಣ(ರಿನ್ಯೂವಲ್), ಸಮುದಾಯ ಆಧಾರಿತ ತರಬೇತಿ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲಾಗುವುದು.
ಅರ್ಹ ಮತ್ತು ಆಸಕ್ತರು ಸೆಪ್ಟೆಂಬರ್ 25 ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿ ಪ್ರಿಂಟ್ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೇಲ್ ಕಟ್ಟಡ ಜಯದೇವ ಸರ್ಕಲ್ ದೂ.ಸಂ, 08192 232349 ಗೆ ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.