ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್‍ಗೆ ಅರ್ಜಿ ಆಹ್ವಾನ

On: June 11, 2024 6:21 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-06-2024

ದಾವಣಗೆರೆ: ಶಾಲಾ ಶಿಕ್ಷಣ ಮತ್ತು ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುμÁ್ಠನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ
ಗುರುತಿಸಲ್ಪಟ್ಟಿರುವ “ದೈಹಿಕ ನ್ಯೂನತೆ” ಮತ್ತು “ಬಹುನ್ಯೂನತೆ” ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜೂನ್ 20 ರೊಳಗೆ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆಯ ಉಪನಿರ್ದೇಶಕರಾದ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ:

ದಾವಣಗೆರೆ ನಗರದಲ್ಲಿನ ವಿಕಲಾಂಗ ವ್ಯಕ್ತಿಗಳ ಸಂಯೋಜಿತ ಪ್ರಾದೇಶಿಕ ಕೇಂದ್ರ 2024-25 ಶೈಕ್ಷಣಿಕ ವರ್ಷದÀ ಡಿ.ಇಡಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶ್ರವಣ ದೋಷ ಮತ್ತು ಬೌದ್ದಿಕ ಬೆಳವಣಿಗೆಯ ಅಸಾಮಥ್ರ್ಯ ಕೋರ್ಸ್, ಪ್ರತಿ ಕೋರ್ಸ್‍ನಲ್ಲಿ 35 ಸೀಟುಗಳನ್ನು ಹೊಂದಿರುವ ಸಿಆರ್‍ಸಿ ಶೇ.50ರಷ್ಟು ಅಂಕಗಳೊಂದಿಗೆ 10+2 ಅರ್ಹತಾ ಮಾನದಂಡಗಳು (ಎಸ್‍ಸಿ,ಎಸ್.ಟಿ, ದಿವ್ಯಾಂಗ ವ್ಯಾಕ್ತಿಗಳು, ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು) 2 ವರ್ಷದ ಕೋರ್ಸ್, ಶುಲ್ಕ ರೂ.24000/-, ಅಂಗವಿಕಲರು ಮತ್ತು ಅವರ ಒಡಹುಟ್ಟಿದವರು, ಕುಟುಂಬದ ಸದಸ್ಯರಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:8746043062, 8125359257 ನ್ನು ಸಂಪರ್ಕಿಸಬೇಕೆಂದು ಸಿಆರ್‍ಸಿ ನಿರ್ದೇಶಕಿ ಮೀನಾಕ್ಷಿ ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment