SUDDIKSHANA KANNADA NEWS/ DAVANAGERE/ DATE:24-11-2024
ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ. 14ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.:08182-200266 /9482762350 ಗಳನ್ನು ಸಂಪರ್ಕಿಸುವುದು.