SUDDIKSHANA KANNADA NEWS/ DAVANAGERE/ DATE:06-01-2024
ದಾವಣಗೆರೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ವೆಬ್‍ಸೈಟ್ https://dom.karnataka.gov.in ನಲ್ಲಿ ಅರ್ಜಿ ಸಲ್ಲಿಸಿ ಹಾಗೂ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ. ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ, ಜಿಲ್ಲಾ ಆಡಳಿತ ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ- 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.