Site icon Kannada News-suddikshana

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:17-02-2024

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 23 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಅಯಾ ತಾಲೂಕು ತೋಟಗಾರಿಕೆ ಕಚೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸುವುದು.

Exit mobile version