SUDDIKSHANA KANNADA NEWS/DAVANAGERE/DATE:25_11_2025
ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್‌ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: BIG NEWS: ದಾವಣಗೆರೆಯಲ್ಲಿ ರಕ್ಷಕರೇ ಭಕ್ಷಕರಾಗಿ ಸಿಕ್ಕಿಬಿದ್ದಿದ್ದೇ ರೋಚಕ: ಇಬ್ಬರು ಪಿಎಸ್ಐಗಳು ಸೇರಿ ನಾಲ್ವರ ಬಂಧನ!
ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿರುತ್ತದೆ. ಆಸಕ್ತ ಮೀನುಗಾರರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು, ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.






Leave a comment