SUDDIKSHANA KANNADA NEWS/ DAVANAGERE/ DATE:16-08-2023
ದಾವಣಗೆರೆ (Davanagere): ಮಹಾನಗರ ಪಾಲಿಕೆಗೆ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು (ಎಸ್.ಹೆಚ್.ಜಿ) ಮತ್ತು ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಯ ಸದಸ್ಯರಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಲ್ಮ್ ಡೇ ಯೊಂದಿಗೆ ನೊಂದಾಯಿಸಿಕೊಂಡ ಎಸ್.ಹೆಚ್.ಜಿ ಮತ್ತು ಎನ್.ಜಿ.ಒ ಸದಸ್ಯರು ತಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು ನಲ್ಮ್ ಡೇ ಯ ಹಿಂಬರಹ ಹಾಗೂ ಗುರುತಿನ ಪುರಾವೆ, ವಿಳಾಸದ ಪುರಾವೆ, ಅರ್ಹತಾ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವುದಕ್ಕೆ (ಎಂಪಾನೆಲ್) ದಾಖಲೆಗಳು, ಶೈಕ್ಷಣಿಕ ಅರ್ಹತೆ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಗಸ್ಟ್ 30 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸುವಂತೆ ಕೋರಲಾಗಿದೆ.
ಅರ್ಜಿ ನಮೂನೆ ಹಾಗೂ ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರಗಳನ್ನು ಪಡೆಯಲು ಮಹಾನಗರ ಪಾಲಿಕೆಯನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.