SUDDIKSHANA KANNADA NEWS/ DAVANAGERE/ DATE:27-10-2023
ದಾವಣಗೆರೆ: ದೀನದಯಾಳ್ ಅಂತ್ಯೋದಯ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸಾಲ ಸೌಲಭ್ಯ ಪಡೆಯಲು ಬಡತನ ರೇಖೆಗಿಂತ ಕೆಳಗಿರುವ, ಮಲೆಬೆನ್ನೂರು ಪಟ್ಟಣ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭಿಯಾನದಡಿ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಕೈಗೊಳ್ಳಲು, ಸಾಮಾಜಿಕ ಕ್ರೂಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಘಟಕದಡಿ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಲು, ಎನ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಯೋಜನೆಯಡಿ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಮತ್ತು ಗುಂಪುಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ದ್ವಿಪ್ರತಿಯೊಂದಿಗೆ ನವಂಬರ್ 10 ರೊಳಗಾಗಿ ಮಲೆಬೆನ್ನೂರು ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದಲ್ಲಿ ಸಂಬಂಧಪಟ್ಟ ಶಾಖೆಯನ್ನು ಸಂಪರ್ಕಿಸಲು ಮಳೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.