(Application Invitation) ರಾಜ್ಯ ಅಥವಾ ಕೇಂದ್ರ ಸರ್ಕಾರ ವಿವಿಧ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ ನೀಡುತ್ತಿದ್ದು, ಇದೀಗ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಿದೆ. ಹೌದು, ನಿರುದ್ಯೋಗಿಗಳು ಉದ್ಯೋಗ ಪ್ರಾರಂಭಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
2024-25 ನೇ ಸಾಲಿನ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಠ ರೂ. 20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುತ್ತದೆ. ಹಾಗದರೆ ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಅಭ್ಯರ್ಥಿಗಳು ಪಿಎಂಇಜಿಪಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.