
SUDDIKSHANA KANNADA NEWS/ DAVANAGERE/ DATE:19-04-2025
ದಾವಣಗೆರೆ: ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆ ಯೋಜನೆಯಡಿ ಪ್ರತಿಷ್ಠಿತ ಖಾಸಗಿ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪ್ರವೇಶ ಬಯಸುವ ಅಭ್ಯರ್ಥಿಯು 5ನೇ ತರಗತಿಯಲ್ಲಿ ಶೇ.60% ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.
ಪೋಷಕರ ವಾರ್ಷಿಕ ವರಮಾನ ರೂ.2 ಲಕ್ಷ ಮೀರಿರಬಾರದು. ನಿಗಧಿತ ನಮೂನೆಯ ಅರ್ಜಿಯೊಂದಿಗೆ ದೃಢೀಕರಿಸಿದ ಅಗತ್ಯ ಪ್ರಮಾಣ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಹಾಯಕ ನಿರ್ದೇಶಕ ಅಥವಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾಢಳಿತ ಭವನ, ಕೊಠಡಿ ಸಂಖ್ಯೆ 45 ರಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಮೇ 3ರೊಳಗೆ ಸಲ್ಲಿಸಲು ಸೂಚಿಸಿದೆ.