SUDDIKSHANA KANNADA NEWS/DAVANAGERE/DATE:04_01_2026
ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ‘ಸಾಧನ ಯೋಜನೆಯಡಿ’ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ 2025-26 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ https://sevasindhuservices.karnataka.gov.in ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಧನೆ ಯೋಜನೆಗೆ ಇದೇ ಜನವರಿ, 31 ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಜಿಲ್ಲೆಯ ಅರ್ಹ ವಿಶೇಷಚೇತನರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳನ್ನು ಸಂಪರ್ಕಿಸಬಹುದಾಗಿದೆ.





Leave a comment