SUDDIKSHANA KANNADA NEWS/ DAVANAGERE/ DATE:24_07_2025
ದಾವಣಗೆರೆ: ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ಕಡೂರಿನಲ್ಲಿ ಅಪಘಾತ: ದಾವಣಗೆರೆಯ ರಿಯಲ್ ಎಸ್ಟೇಟ್ ಉದ್ಯಮಿ ಪ್ರತಾಪ್ ಪವಾರ್ ದಾರುಣ ಸಾವು
ನಮೂನೆ-1 ಹಾಗೂ 2ರಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು ಈ ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿಯಿಂದ ಪಡೆದು ಆಗಸ್ಟ್ 25 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ಫೋ:08192-263936 ಸಂಪರ್ಕಿಸಲು
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.