ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

On: April 3, 2025 5:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-04-2025

ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು.

ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆದಾವಣಗೆರೆ ತಾಲ್ಲೂಕು ಹಳೇಬಾತಿ, ಆಲೂರಟ್ಟಿ, ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮ ಪಂಚಾಯಿತಿಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141, ಹರಿಹರ ತಾಲ್ಲೂಕು ಮೊ:9945458058 ಇವರನ್ನು ಸಂಪರ್ಕಿಸಬೇಕೆಂದು ಕಲ್ಯಾಣಾಧಿಕಾರಿ ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment