SUDDIKSHANA KANNADA NEWS/ DAVANAGERE/ DATE:17_07_2025
ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಪ್‍ನಾನ್ ಟೆಕ್ನಿನಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
READ ALSO THIS STORY: 23 ವರ್ಷದಿಂದ ದಾವಣಗೆರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಕಳ್ಳ ಸಿಕ್ಕಿಬಿದ್ದಿದ್ದೇ ರೋಚಕ!
ಜೂನಿಯರ್ ಇಂಜಿನಿಯರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್: https://.ssckkr.kar.nic.in & https://ssc.gov.in ಮೂಲಕ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗೆ www.ssckkr.kar.nic.in & https://ssc.gov.in ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ಜುಲೈ 21 ಮತ್ತು ಮಲ್ಟಿ ಟಾಸ್ಕಿಂಗ್ ಹುದ್ದೆಗೆ ಜುಲೈ 24 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-2527342/25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.