ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರಥಮ ವರ್ಷದ ಡಿಪ್ಲೊಮಾ ಸೇರಿ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

On: July 28, 2025 7:21 PM
Follow Us:
ಅರ್ಜಿ
---Advertisement---

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ (ಜುಲೈ-ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್‍ಸ್ಸಿ, ಬಿ.ಲಿಬ್,ಐಎಸ್‍ಸಿ, ಬಿ.ಸಿ.ಎ, ಬಿ.ಬಿ.ಎ, ಬಿಎಸ್‍ಡಬ್ಲೂ್ಯ, ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್.ಐಎಸ್‍ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್ ಡಬ್ಲೂ್ಯ, ಪಿಜಿ, ಡಿಪ್ಲೊಮಾ., ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ.  ಅರ್ಜಿಯನ್ನೂ ಆಹ್ವಾನಿಸಲಾಗಿದೆ.

READ ALSO THIS STORY: ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಬ್ಯಾಂಕ್ ಅಧಿಕಾರಿ ನೇಮಕಾತಿ 2025: 2500 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ. ಬಿಪಿಎಲ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ,ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 10 ರಿಯಾಯಿತಿ ನೀಡಲಾಗುವುದು.

ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ,ಮತ್ತು ಎಂ.ಬಿ.ಎ ಹೊರತುಪಡಿಸಿ)ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ಕ.ರಾ.ಮ.ವಿ.ಯ ಯಾವುದೇ ಕೋರ್ಸ್ ಗಳಿಗೆ ಸೇರಬಯಸುವ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬುದ್ವಿಸ್ಟ್, ಮತ್ತು ಪಾರ್ಸಿ) ಅರ್ಹ ಅಭ್ಯಾರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಬೇಟಿ ನೀಡಿದರೆ ಉಚಿತ ಪ್ರವೇಶಾತಿ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in 9844926125, 8971004272,8310676181, 9902517906, 9916009318, 8747919317, ಕರೆ ಮಾಡುವುದು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಶ್ರೀ ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯಲ್ಲಿರುವ ಕಛೇರಿಯನ್ನು ಸಂಪರ್ಕಿಸಬೇಕೆಂದು ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment