Site icon Kannada News-suddikshana

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ದಾಖಲೆಗಳು ಹಾಗೂ ಅರ್ಹತೆ ಏನಿರಬೇಕು?

ಅರ್ಜಿ

SUDDIKSHANA KANNADA NEWS/ DAVANAGERE/DATE:13_08_2025

ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ: kacdc.karnataka.gov.ing ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
READ ALSO THIS STORY: ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಮೈಮೇಲೆಳೆದುಕೊಂಡ ವಿವಾದ ಏನು?
ಅರ್ಜಿ ಸಲ್ಲಿಸಲು 31/10/2025 ಕೊನೆಯ ದಿನಾಂಕವಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು:
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
  1. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು,
  2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).
  3. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು
  4. ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
  5. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು.
  6. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
  7. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5, ಮೀಸಲಾತಿ ಇರಿಸಿದೆ.
  8. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಸಂಪರ್ಕ ವಿವರ: (ಬೆಳಿಗ್ಗೆ:10 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

Exit mobile version