SUDDIKSHANA KANNADA NEWS/ DAVANAGERE/ DATE:24-10-2024
ದಾವಣಗೆರೆ: ಕೇಂದ್ರ ಸರ್ಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು. ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಿಸಲಾಗಿದೆ.
ರಾಜ್ಯದ ಲೋಕಸಭಾ ಸದಸ್ಯರ ಪೈಕಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಕ ಮಾಡಲಾಗಿರುವುದು ವಿಶೇಷ. ಈ ಸಮಿತಿಗೆ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ , ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರಾದ ಜಯಂತ್ ಚೌಧರಿ
ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವರಾದ ಡಾ.ಸುಕಾಂತ ಮಜುಂದಾರ್ ಅವರುಗಳು ಅಧ್ಯಕ್ಷರಾಗಿದ್ದಾರೆ.
ಈ ಸಮಿತಿಯಲ್ಲಿ ಎಂಟು ಲೋಕಸಭಾ ಸದಸ್ಯರು ಹಾಗೂ ಎಂಟು ರಾಜ್ಯಸಭಾ ಸದಸ್ಯರು ನೇಮಕಗೊಂಡಿದ್ದಾರೆ ಹಾಗೂ ಇಬ್ಬರು ಪದನಿಮಿತ್ತ ಸದಸ್ಯರುಗಳಿದ್ದಾರೆ. ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಆರೋಗ್ಯ ಸಮಿತಿಯ
ಜೊತೆಯಲ್ಲಿ ಶಿಕ್ಷಣ ಸಮಿತಿಗೂ ಸದಸ್ಯರಾಗಿರುವುದು ವಿಶೇಷವಾಗಿದೆ.