
SUDDIKSHANA KANNADA NEWS/ DAVANAGERE/ DATE:19-04-2025
ದಾವಣಗೆರೆ: ಭಾರತೀಯ ಯುವ ಕಾಂಗ್ರೆಸ್ನ ತೆಲಂಗಾಣ ಉಸ್ತುವಾರಿಯಾಗಿ ದಾವಣಗೆರೆಯವರಾದ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ.


ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಜಿ ಮತ್ತು ರಾಷ್ಟ್ರೀಯ ಉಸ್ತುವಾರಿ ಕೃಷ್ಣ ಅಲ್ಲಾವರು ಅವರಿಗೆ ಸೈಯದ್ ಖಾಲಿದ್ ಅಹ್ಮದ್ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಯುವಕರ ಧ್ವನಿಯಾಗಿ, ಕಾಂಗ್ರೆಸ್ ಪಕ್ಷದತ್ತ ಯುವಕರು ಒಲವು ತೋರುವ ನಿಟ್ಟಿನಲ್ಲಿ ಹಾಗೂ ಮತ್ತಷ್ಟು ಬಲಿಷ್ಠವಾಗಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದಾರೆ.
ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ಸಂತೋಷ ತಂದಿದೆ. ನಿಮ್ಮ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುತ್ತೇನೆ. ಯುವ ಕಾಂಗ್ರೆಸ್ ಮತ್ತಷ್ಟು ಬಲಿಷ್ಠಗೊಳ್ಳಲು ಹಗಲಿರುಳು ಶ್ರಮಿಸುತ್ತೇನೆ. ರಾಷ್ಟ್ರೀಯ ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಖಾಲಿದ್ ಅಹ್ಮದ್ ಹೇಳಿದ್ದಾರೆ.
ಈ ಹಿಂದೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದೆ. ಆಗಲೂ ಸ್ಥಳೀಯ ನಾಯಕರು ನೀಡಿದ ಸಹಕಾರ ತುಂಬಾನೇ ಸಹಕಾರಿಯಾಯಿತು. ಈಗ ನೀಡಿರುವ ಜವಾಬ್ದಾರಿಯು ದೊಡ್ಡದು. ಭಾರತೀಯ ಯುವ ಕಾಂಗ್ರೆಸ್ ತೆಲಂಗಾಣ ಉಸ್ತುವಾರಿಯಾಗಿ ನೇಮಕ ಮಾಡಿದವರಿಗೆ ನಾನು ಆಭಾರಿಯಾಗಿರುತ್ತೇನೆ ಎಂದು ಅವರು ತಿಳಿಸಿದ್ದಾರೆ.