ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ರವರು ಮುಸ್ಲಿಮರಿಗೆ ಮುತ್ತು ಕೊಡ್ತಾರೆ ನಮಗೆ ಲಾಠಿ ಏಟು ಕೊಡ್ತಾರೆ, ಸಿದ್ದರಾಮಯ್ಯನವರಿಗೆ ಮುಸ್ಲಿಮರನ್ನು ಕಂಡರೆ ಅಪಾರವಾದ ಪ್ರೀತಿ ಎಲ್ಲಾರ ಮೀಸಲಾತಿಯನ್ನು ಅವರಿಗೆ ಕೊಡಲು ಹೊರಟಿದ್ದಾರೆ ಎಂದು ಹರಿಹಾಯ್ದರು.
ಹುಬ್ಬಳ್ಳಿ ಡಿ.14: ನಗರದಲ್ಲಿ ಮಾತನಾಡಿದ ಬೆಲ್ಲದರವರು ಹುಬ್ಬಳ್ಳಿಯಲ್ಲಿ ಪೋಲಿಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಗಲಭೆಕೋರರಿಗೆ ಇವರು ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಇವರು ಮುತ್ತು ಕೊಡುತ್ತಾರೆ, ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮವರ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಕಿಡಿ ಕಾರಿದರು.
ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು
ಎಲ್ಲರ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿರುವ ಸಿಎಂ ರವರು ಹಸಿ ಗೋಡೆ ಮೇಲೆ ಹಳ್ಳು ಒಗೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧಿಯಾಗುತ್ತದೆ ಈ ಬಗ್ಗೆ ಸಿದ್ದರಾಮಯ್ಯ ಶ್ವೇತ ಪತ್ರ ಹೊರಡಿಸಲಿ ಎಂದಿದ್ದಾರೆ.
ಲಾಠಿ ಚಾರ್ಜ್ ಸಂಪೂರ್ಣ ಹೊಣೆ ಸಿದ್ದರಾಮಯ್ಯನವರದ್ದು
ಕಾಂಗ್ರೆಸ್ ಸರ್ಕಾರ ನಮಗೆ ಯಾವುದೇ ರೀತಿಯ ಮೀಸಲಾತಿ ಕೊಡುವುದಿಲ್ಲ ಎಂದು ಗ್ಯಾರೆಂಟಿ ಇದೆ. ಲಾಠಿ ಚಾರ್ಜಿನ ಸಂಪೂರ್ಣ ಹೊಣೆಯನ್ನು ಸಿಎಂ ರವರೆ ಹೊರಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಮುಸ್ಲಿಮರನ್ನು ಓಲೈಸುವುದನ್ನು ಬಿಟ್ಟರೆ ಬೇರೆನು ಇಲ್ಲ, ಹಿಂದೂ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ಎನ್ನುವ ಅರಿವೆ ಅವರಿಗೆ ಇಲ್ಲವೆಂದು ಅನಿಸುತ್ತದೆ. ಮೀಸಲಾತಿ ಮುಸ್ಲಿಂ ಸಮಾಜಕ್ಕೂ ಕೊಡಲಿ ನಾವು ಬೇಡ ಅನ್ನಲ್ಲ, ಆದರೆ ಎಲ್ಲಾ ದುಡ್ಡಿನ ಮೀಸಲಾತಿ ಮುಸ್ಲಿಂ ಸಮಾಜಕ್ಕೆ ಎಂದರೆ ಹೇಗೆ ಪ್ರೆಶ್ನಿಸಿದರು?.