SUDDIKSHANA KANNADA NEWS/ DAVANAGERE/DATE:22_09_2025
ಮೈಸೂರು: ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಈ ಸುದ್ದಿಯನ್ನೂ ಓದಿ: ಅಸ್ತ್ರಗಳಿಂದಲ್ಲ ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ ಪ್ರೀತಿಯಿಂದ ಬದುಕು ಅರಳಿಸಬಹುದು: ಬಾನು ಮುಷ್ತಾಕ್
ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.
ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.