Site icon Kannada News-suddikshana

ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪೆರ್ಮನ್ನೂರ ಗ್ರಾಮದ ದಾರಂದ ಬಾಗಿಲಿನ ನಿತ್ಯಾಧರ ಚರ್ಚ್ ಬಳಿ ನಿವಾಸಿ ದಾವೂದು ಪರ್ವೇಝ್(37) ಬಂಧಿತ ಆರೋಪಿ.

ಮೇ 14ರಂದು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಆರೋಪಿ ದಾವೂದ್ ಪರ್ವೇಝ್ ಎಂಡಿಎಂಎ ಮಾರಾಟ ಮಾಡುತ್ತಿದ್ದ. ಈ ವೇಳೆ Anti-Drug Team ನ ಅಧಿಕಾರಿ ಮತ್ತು ಸಿಬ್ಬಂದಿ, ಮಂಗಳೂರು ಗ್ರಾಮಾಂತರ ಪೊಲೀಸ್‍ ಠಾಣಾ ಪಿಎಸ್‍ಐ ಅರುಣ್ ಕುಮಾರ್ ಡಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 10 ಗ್ರಾಂ ತೂಕದ ಎಂಡಿಎಂಎ (ಅಂದಾಜು ಮೌಲ್ಯ 15,000) ಹಾಗೂ 810 ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version