Site icon Kannada News-suddikshana

ಗೇರ್ ಸೈಕಲ್ ಕಳ್ಳತನ ಮಾಡಿದ್ದ ಮೂವರು ಆರೋಪಿಗಳ ಬಂಧನ

SUDDIKSHANA KANNADA NEWS/ DAVANAGERE/ DATE:06-12-2023

ದಾವಣಗೆರೆ: ಗೇರ್ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾನಗರ ಪೊಲೀಸರು ಐದು ಸೈಕಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿಯ ಕೆ. ಜೆ. ದರ್ಶನ್ (19), ದಾವಣಗೆರೆಯ ಓಂಕಾರ್ (18) ಹಾಗೂ ಯಶವಂತ (19) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಕಳ್ಳತನ ಮಾಡಿದ್ದ ಒಟ್ಟು 1,06,000 ರೂ. ಬೆಲೆ ಬಾಳುವ 5 ಗೇರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಒಟ್ಟು 3 ಪ್ರಕರಣಗಳು ಪತ್ತೆಯಾಗಿವೆ.

ದಾವಣಗೆರೆಯ ಆಂಜನೇಯ ಬಡಾವಣೆಯ 8 ನೇ ಕ್ರಾಸ್ ನ ವಾಸಿ ರಾಜೇಶ್ವರಿ ಎಂಬುವವರು ವಿದ್ಯಾನಗರ ಪೊಲೀಸ್ ಠಾಣೆಗೆ ಬಂದು ಅಂದಾಜು 25,000 ರೂ ಬೆಲೆ ಬಾಳುವ ಸೈಕಲ್ ಅನ್ನು ನವೆಂಬರ್ 1 ರಂದು ರಾತ್ರಿ 10 ಗಂಟೆಯ ಸುಮಾರಿನಲ್ಲಿನಮ್ಮ ಮನೆಯ ಮುಂದೆ ನಿಲ್ಲಿಸಿದ್ದು, ಮಾರನೇ ದಿನ ಬೆಳಿಗ್ಗೆ 3 ಗಂಟೆ ಸುಮಾರಿಗೆ ನೋಡಲಾಗಿ ನಿಲ್ಲಿಸಿದ್ದ ಸೈಕಲ್ ಇರಲಿಲ್ಲ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದರು.

ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಪ್ರಭಾವತಿ. ಸಿ. ಶೇತಸನದಿ ಅವರ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪಿ.ಎಸ್.ಐ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು. ಈ ತಂಡವು ಆರೋಪಿಗಳನ್ನು
ಪತ್ತೆ ಮಾಡಿ ಸೈಕಲ್ ಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳು ಹಾಗೂ ಸೈಕಲ್ ವಶಪಡಿಸಿಕೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಅಭಿನಂದಿಸಿದ್ದಾರೆ.

Exit mobile version