SUDDIKSHANA KANNADA NEWS/ DAVANAGERE/ DATE:25-12-2024
ಬೆಳಗಾವಿ: ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದವರು ಯಾವ ಪಕ್ಷಕ್ಕೆ ಸೇರಿದವರು ಎಂಬುದು ಸಿಎಂ ಸಿದ್ದರಾಮಯ್ಯರಿಗೆ ಗೊತ್ತಿಲ್ವಂತೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ಎಸೆದವರು ಯಾವ ಪಕ್ಷಕ್ಕೆ ಸೇರಿದವರು ಎಂಬುದು ಗೊತ್ತಿಲ್ಲ ಎಂದು ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದು ಹೇಳಿದರು,
ಬದಲಾವಣೆ ನಿರಂತರವಾದ ಪ್ರಕ್ರಿಯೆ:
ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು.