SUDDIKSHANA KANNADA NEWS/ DAVANAGERE/ DATE:25-04-2023
ದಾವಣಗೆರೆ (DAVANAGERE): ದೇಶಾದ್ಯಂತ ಬಿಜೆಪಿ (BJP) ಪರ ಅಲೆ ಇದೆ. ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಕರ್ನಾಟಕದಲ್ಲಿಯೂ ಅಭಿವೃದ್ಧಿ ಆಗಿದೆ. ಜನರು ಬಿಜೆಪಿ ಪರ ಇದೆ. ಈ ಕಾರಣಕ್ಕೆ ಕಾಂಗ್ರೆಸ್ (CONGRESS) ಹತಾಶೆಗೊಂಡಿದೆ ಎಂದು ಅಸ್ಸಾಂ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಸರ್ಬಾನಂದ್ ಸೊನೊವಾಲ್ ಹೇಳಿದರು.
ಜಿಎಂಐಟಿ(GMIT) ಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 55 ವರ್ಷಗಳಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಜನವಿರೋಧಿ ಆಗಿತ್ತು. ಅಭಿವೃದ್ಧಿ ಕೆಲಸ ಮಾಡಿರಲಿಲ್ಲ. ಕಳೆದ 9 ವರ್ಷಗಳಲ್ಲಿ ಕ್ರಾಂತಿಕಾರಕ ಬದಲಾವಣೆ ಜೊತೆಗೆ ಅಭಿವೃದ್ಧಿ ಹೆಚ್ಚಾಗಿದೆ. ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಪರಿಹರಿಸಲು ಶ್ರಮಿಸುತ್ತಿದೆ. ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ ಜನರು ಈಗಾಗಲೇ ನಿರ್ಧಾರ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP)ಪರವಾಗಿ ನಿಲ್ಲುತ್ತಾರೆ. ಅಭಿವೃದ್ಧಿಗೆ ಮತ ನೀಡುತ್ತಾರೆ. ಜಾತಿ ಆಧಾರಿತ ರಾಜಕಾರಣ ಬಿಜೆಪಿ (BJP)ಮಾಡಿಲ್ಲ. ಅಭಿವೃದ್ಧಿಯೊಂದೇ ಮಂತ್ರ ಎಂದರು.
ಭಾರತ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಡಿ ಪ್ರಧಾನಿ ನರೇಂದ್ರ ಮೋದಿ (MODI) ಕೆಲಸ ಮಾಡುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಯೋಜನೆಗಳ ಜಾರಿ, ಜೀವನಕ್ರಮ, ಅಭಿವೃದ್ಧಿ, ರಕ್ಷಣೆ ಸೇರಿದಂತೆ ಹತ್ತು ಹಲವು ರೀತಿಯಲ್ಲಿ ಕೆಲಸ ಮಾಡಿದೆ. ಜಾಗತಿಕ ಆರ್ಥಿಕ ಅಭಿವೃದ್ಧಿಯಲ್ಲಿ 5 ನೇ ರಾಷ್ಟ್ರವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ. ಕರ್ನಾಟಕರು ತುಂಬಾ ಶಕ್ತಿಯುಳ್ಳವರು. ಜ್ಞಾನ ಹೊಂದಿದ್ದಾರೆ. ಮೊದಲ ಬಾರಿಗೆ ದಾವಣಗೆರೆಗೆ ಬಂದಿದ್ದೇನೆ. ಈ ಬಾರಿ ಬಿಜೆಪಿ ಪರ ಒಲವಿದೆ. ಪ್ರಧಾನಿ ನರೇಂದ್ರ ಮೋದಿ (MODI) ನೇತೃತ್ವದಲ್ಲಿ ಒಳ್ಳೆಯ ಕಾರ್ಯ ಆಗುತ್ತಿದೆ. ಹೊಸಬರಿಗೆ ಅವಕಾಶ ಕೊಟ್ಟಿದೆ. ಇದು ಬಿಜೆಪಿ ಶಕ್ತಿ ಎಂದು ಹೇಳಿದರು.
ಗೋಷ್ಠಿಯಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ವಕ್ತಾರ ಶಿವಶಂಕರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಜಿ. ಅಜಯ್ ಕುಮಾರ್, ದೂಡಾ ಮಾಜಿ ಅಧ್ಯಕ್ಷರಾದ ಯಶವಂರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ದೇವರಮನಿ ಶಿವಕುಮಾರ್, ಸೋಗಿ ಶಾಂತಕುಮರ್, ಶಿವನಗೌಡ ಟಿ. ಪಾಟೀಲ್ ಮತ್ತಿತರರು ಹಾಜರಿದ್ದರು.