ದಾವಣಗೆರೆ: ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ, ಜಿಲ್ಲೆಯಾದ್ಯಂತ ಆಯ್ದ ದಿನಾಂಕಗಳಂದು ಮದ್ಯ ಮಾರಾಟ ಮತ್ತು ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತದ ಸೂಚನೆಯಂತೆ ದಾವಣಗೆರೆ ಪಾಲಿಕೆ, ಗ್ರಾಮಾಂತರ, ಚನ್ನಗಿರಿ ಹಾಗೂ ಹೊನ್ನಾಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ದಿನಗಳಂದು ಬಾರ್, ವೈನ್ ಶಾಪ್ ಹಾಗೂ ಮದ್ಯ ಸರಬರಾಜು ಬಂದ್ ಇರಲಿದೆ.
ದಾವಣಗೆರೆ ನಗರ (ಪಾಲಿಕೆ ವ್ಯಾಪ್ತಿ): ಸೆಪ್ಟೆಂಬರ್ 16, 18 ಮತ್ತು 22 (ಬೆಳಿಗ್ಗೆ 6:00 ರಿಂದ ರಾತ್ರಿ 12:00 ರವರೆಗೆ).
ಮಲೇಬೆನ್ನೂರು ಪುರಸಭೆ ವ್ಯಾಪ್ತಿ: ಸೆಪ್ಟೆಂಬರ್ 16, 18, 22, 24 ಮತ್ತು 27 (ಬೆಳಿಗ್ಗೆ 6:00 ರಿಂದ ರಾತ್ರಿ 12:00 ರವರೆಗೆ).
ಹರಿಹರ ನಗರ ವ್ಯಾಪ್ತಿ: ಅಕ್ಟೋಬರ್ 4 (ಬೆಳಿಗ್ಗೆ 6:00 ರಿಂದ ರಾತ್ರಿ 12:00 ರವರೆಗೆ).
ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 8 ರ ನಡುವೆ ವಿಸರ್ಜನಾ ಮೆರವಣಿಗೆಯ ಆಯ್ದ ದಿನಗಳಲ್ಲಿ ಮಧ್ಯರಾತ್ರಿಯಿಂದ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.





Leave a comment