SUDDIKSHANA KANNADA NEWS/ DAVANAGERE/ DATE:14_07_2025
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಗೆ ಸ್ವಚ್ಛ ಸರ್ವೇಕ್ಷಣೆ 2024ರ ಸ್ವಚ್ಛತಾ ಸಮೀಕ್ಷೆಯಲ್ಲಿ ಸ್ವಚ್ಛತೆ ಹಾಗು ಘನತ್ಯಾಜ್ಯ ನಿರ್ವಹಣೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟದಲ್ಲಿ ಮಿನಿಷ್ಟ್ರೀಯಲ್ ಅವಾರ್ಡ್ ಲಭಿಸಿದೆ.
ಈ ಸುದ್ದಿಯನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್!
ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಸ್ವಚ್ಛತೆಯಲ್ಲಿ ಅತ್ಯುತ್ತಮ ಸಾಧನೆಗಾಗಿ ಕೇಂದ್ರ ಸರ್ಕಾರವು ಈ ಪ್ರಶಸ್ತಿ
ನೀಡಿದೆ.
ಈ ಸಾಧನೆಗೆ ಸಹಕರಿಸಿ ಸದಾ ಒತ್ತುಕೊಟ್ಟು ಪ್ರೋತ್ಸಾಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾಧಿಕಾರಿ
ಜಿ. ಎಂ. ಗಂಗಾಧರ ಸ್ವಾಮಿ ಅವರಿಗೆ ಧನ್ಯವಾದ ಸಲ್ಲಿಸಲಾಗಿದೆ.
READ ALSO THIS STORY: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ
ಪಾಲಿಕೆಗೆ ಸಹಕರಿಸಿದ ನಗರದ ಸಾರ್ವಜನಿಕರಿಗೆ, ಪೌರಕಾರ್ಮಿಕರು, ವಾಹನ ಚಾಲಕರು, ಕ್ಲೀನರ್ಸ್, ಲೋಡರ್ಸ್, ಆರೋಗ್ಯ ನಿರೀಕ್ಷಕರುಗಳು, ನೈರ್ಮಲ್ಯ ಮೇಲ್ವಿಚಾರಕರು, ಎಲ್ಲಾ ಸ್ವಚ್ಛತಾ ಸಿಬ್ಬಂದಿಗಳಿಗೆ ತುಂಬು ಹೃದಯದ
ಧನ್ಯವಾದಗಳನ್ನು ಅರ್ಪಿಸಲಾಗಿದೆ.
ದಾವಣಗೆರೆ ಜನರಿಗೆ ಸಂದ ಪ್ರಶಸ್ತಿ:
ಈ ವೇಳೆ ಮಾತನಾಡಿದ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಗಡಿಗುಡಾಳ್ ಮಂಜುನಾಥ್ ಅವರು, ಮಹಾನಗರ ಪಾಲಿಕೆಗೆ ಈ ಪ್ರಶಸ್ತಿ ಸಿಕ್ಕಿದ್ದು ಖುಷಿ ತಂದಿದೆ. ದಾವಣಗೆರೆ ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಡಾ. ಶಾಮನೂರು ಶಿವಶಂಕರಪ್ಪ ಅವರ ಮಾರ್ಗದರ್ಶನದಲ್ಲಿ ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಉತ್ತಮ ಕೆಲಸ ಮಾಡಿದ್ದಾರೆ. ಪಾಲಿಕೆಯ ಎಲ್ಲಾ ನೌಕರರು, ಸಿಬ್ಬಂದಿಗಳು, ಪೌರ ಕಾರ್ಮಿಕರು ಸೇರಿದಂತೆ ಎಲ್ಲರೂ ಈ ಪ್ರಶಸ್ತಿಗೆ ಅರ್ಹರು ಎಂದು ತಿಳಿಸಿದರು.
ಕಸ ವಿಲೇವಾರಿಗೆ ದಾವಣಗೆರೆಯಲ್ಲಿ ಕೈಗೊಂಡ ಕ್ರಮಗಳು ಉತ್ತಮವಾಗಿವೆ. ಹಸಿ ಕಸ, ಒಣ ಕಸ ಬೇರ್ಪಡಿಸಿ, ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಎಲ್ಲಾ ಅಂಶಗಳನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ದಾವಣಗೆರೆ ಮಹಾನಗರ ಪಾಲಿಕೆಗೆ ಪ್ರಶಸ್ತಿ ಬಂದದ್ದು ದಾವಣಗೆರೆ ಜನರಿಗೆ ಸಂದ ಗೌರವ ಎಂದು ಹೇಳಿದರು.
ಪಾಲಿಕೆ ಆಯುಕ್ತೆ ರೇಣುಕಾ, ಮಾಜಿ ಮಹಾಪೌರರಾದ ಕೆ. ಚಮನ್ ಸಾಬ್, ಪರಿಸರ ಅಭಿಯಂತರ ಬಸವಣ್ಣ, ಆರೋಗ್ಯ ನಿರೀಕ್ಷಕರು ಹಾಗೂ ಪಾಲಿಕೆಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಈ ವೇಳೆ ಮಹಾನಗರ ಪಾಲಿಕೆ
ಮಾಜಿ ಸದಸ್ಯರಾದ ಎ. ನಾಗರಾಜ್, ಗಡಿಗುಡಾಳ್ ಮಂಜುನಾಥ್, ಅಬ್ದುಲ್ ಲತೀಫ್, ಉದಯ್ ಕುಮಾರ್, ಜಾಕೀರ್ ಆಲಿ ಮತ್ತಿತರರು ಹಾಜರಿದ್ದರು.