SUDDIKSHANA KANNADA NEWS/DAVANAGERE/DATE:31_10_2025
ದಾವಣಗೆರೆ: ವಿಕಲಚೇತನರ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರುವ ರಾಜ್ಯ ವಿಕಲಚೇತನರ ಆರ್‌ಪಿಡಿ ಟಾಸ್ಕ್ಪೋರ್ಸ್ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ಎಂ. ವಿಜಯಲಕ್ಷ್ಮೀ ಅವರಿಗೆ ರಾಜ್ಯ ಸರ್ಕಾರವು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಆರೈಕೆದಾರರ ದಿನಾಚರಣೆಯಂದು ‘ಉತ್ತಮ ಆರೈಕೆದಾರರ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
READ ALSO THIS STORY: ಚಿನ್ನದ ಬೆಲೆ ಗಗನಕ್ಕೆೇರಿದ್ದರಿಂದ ಕಳ್ಳರಿಂದ ತಪ್ಪಿಸಿಕೊಳ್ಳಲು ಪೊಲೀಸರ ಈ ಸೂಚನೆಗಳ ಪಾಲಿಸಿದರೆ ಸಾಕು!
ಎಂ. ವಿಜಯಲಕ್ಷ್ಮೀ ಅವರು ತಮ್ಮ ಎರಡು ವಿಕಲಚೇತನ ಹೆಣ್ಣು ಮಕ್ಕಳ ಹೆಸರಿನಲ್ಲಿ ಸೇವಾ ಟ್ರಸ್ಟ್ ಆರಂಭಿಸಿರುವುದು ಮಾತ್ರವಲ್ಲದೇ, ಸುಮಾರು 8 ವರ್ಷಗಳಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ.
ಬಡ ಮತ್ತು ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ. ಈಗಾಗಲೇ ವಿಕಲಚೇತನರ ಕ್ಷೇತ್ರದಲ್ಲಿ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದನ್ನು ಸ್ಮರಿಸಿಬಹುದು.


