ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿ. ಬಿ. ವಿನಯ್ ಕುಮಾರ್ “ಅಪ್ಪ” ಪ್ರಶಸ್ತಿಗೆ ಆಯ್ಕೆ

On: August 18, 2025 10:01 AM
Follow Us:
prize
---Advertisement---

SUDDIKSHANA KANNADA NEWS/ DAVANAGERE/DATE:18_08_2025

ದಾವಣಗೆರೆ: ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅವರು ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನದಿಂದ ದಿವಂಗತ ಖತಾಲಸಾಬ ಅಲಗೂರ ಸ್ಮರಣಾರ್ಥ ಕೊಡಮಾಡಲ್ಪಡುವ “ಅಪ್ಪ” ಪ್ರಶಸ್ತಿಗೆ ಆಯ್ತೆಯಾಗಿದ್ದಾರೆ.

READ ALSO THIS STORY: ಧರ್ಮಸ್ಥಳ ಬಗ್ಗೆ ಅಪಪ್ರಚಾರ: ತಿಮ್ಮರೋಡಿ, ಮಟ್ಟೆಣ್ಣನವರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಆ. 20ಕ್ಕೆ ದಾವಣಗೆರೆಯಲ್ಲಿ ಪ್ರತಿಭಟನೆ

ಜಿ. ಬಿ. ವಿನಯ್ ಕುಮಾರ್ ಜೊತೆಗೆ ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರೂ ಸಹ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ.

ಆಗಸ್ಟ್ 30ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಜಿ. ಬಿ. ವಿನಯ್ ಕುಮಾರ್ ಹಾಗೂ ಮಹೇಶ ಪೋತದಾರ ಅವರಿಗೆ ಪ್ರದಾನ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಾರಂಭದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment