SUDDIKSHANA KANNADA NEWS/ DAVANAGERE/ DATE:21-02-2025
ದಾವಣಗೆರೆ: ಫೆಬ್ರವರಿ 22 ರಂದು ಬೆಳಿಗ್ಗೆ 10.30ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಜಿಲ್ಲಾ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಆಯುಷ್ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್.ಹೆಗಡೆ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯ, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಆರ್.ಎನ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಎಸ್.ಟಿ.ಎಫ್.ಸಿ-1 ಶ್ರೀರಾಮ ನಾರಾಯಣ ಹೆಗಡೆ, ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಶಿವಪ್ಪ ಗಂಗಪ್ಪ ಸಲಗೆರೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ನಿವೇದಿತ.ಟಿ.ಎಂ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ, ಪಾಲ್ಗೋಳುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಕುಮಾರ್.ಬಿ.ಯು ತಿಳಿಸಿದ್ದಾರೆ.