SUDDIKSHANA KANNADA NEWS/ DAVANAGERE/ DATE-06-06-2025
ಬೆಂಗಳೂರು: ಬೆಂಗಳೂರು ರಾಯಲ್ ಚಾಲೆಂಜರ್ಸ್ ಐಪಿಎಲ್ ಟಿ-20 ಚಾಂಪಿಯನ್ ಆದ ಬಳಿಕ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮೊದಲು ರಾಜೀನಾಮೆ ನೀಡಬೇಕು. ಅದನ್ನು ಬಿಟ್ಟು ಖಡಕ್ ಅಧಿಕಾರಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿರುವುದಕ್ಕೆ ಕರ್ನಾಟಕದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿರುವುದು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ಎಂಬ ಮಾತು ಹೇಳುತ್ತಾ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದಾರೆ.
ಹಳ್ಳಿ ಕಡೆ ಒಂದು ನಮ್ಮ ಹಿರಿಯರು ಒಂದು ಮಾತು ಹೇಳುತ್ತಾರೆ.”ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುತ್ತಾರೆ”ಹಾಗೇ ಆಯ್ತು ರಾಜ್ಯ ಸರ್ಕಾರದ ಈ ನಡೆ ಹಿರಿಯ ಪೋಲಿಸ್ ಅಧಿಕಾರಗಳನ್ನು ಅಮಾನತು
ಮಾಡಿರುವುದು ಖಂಡನೀಯ. ನನಗೆ ಗೊತ್ತಿರುವಂತೆ ಒಬ್ಬ ಸಿನಿಮಾ ನಟ ನಟಿಯರನ್ನು ಹಾಗೂ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರಚಾರ ಬೇಡ ಯಾಕೆಂದರೆ ಅವರನ್ನು ಕ್ರೀಡಾ ಅಭಿಮಾನಿಗಳು ಅವರಿಗೆ ಪ್ರೋತ್ಸಾಹ ಕೊಟ್ಟು ಬೆಳೆಸುತ್ತಾರೆ. ನಮ್ಮ ರಾಜ್ಯದ ಕನ್ನಡದ ಕಣ್ಮಣಿ ಎಂದೇ ಪ್ರಸಿದ್ಧರಾಗಿದ್ದ ಡಾ.ರಾಜಕುಮಾರ್, ಅವರಿಗೆ ಅತಿ ದೊಡ್ಡ ಅಭಿಮಾನಿ ಬಳಗವಿತ್ತು. ಅದರ ನಂತರ ಕ್ರಿಕೆಟ್ ತಂಡ ಆದ ಆರ್‌ಸಿಬಿ ತಂಡಕ್ಕೆ ಅತಿ ದೊಡ್ಡ ಅಭಿಮಾನಿ ಬಳಗವಿದೆ. ಇಷ್ಟೆಲ್ಲಾ ನೀಡಿದರೂ ಮಾಹಿತಿ ಇದ್ದರೂ ಸಹ ಸಂಭ್ರಮಾಚರಣೆ ಮಾಡಲು ಕೈಗೊಂಡ ಕ್ರಮ ಸರಿಯಾಗಿಲ್ಲ ಎಂಬುದು ಜನರ ಅಭಿಪ್ರಾಯ.
ರಾಜ್ಯ ಸರ್ಕಾರದ ಕ್ರಮವಾಗಿದೆ ಈ 11 ಮಂದಿ ಸಾವನ್ನಪ್ಪಿದ್ದಾರೆ. ಸಿಎಂ ಮತ್ತು ಡಿಸಿಎಂ ಅವರು ರಾಜೀನಾಮೆ ನೀಡಬೇಕು. ಅದನ್ನ ಬಿಟ್ಟು ಅಧಿಕಾರಿಗಳನ್ನು ಅಮಾನತು ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು
ಕ್ರೀಡಾಭಿಮಾನಿಗಳು, ಕ್ರೀಡಾಸಕ್ತರು, ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್: ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ಡಿಸಿಪಿ ಟಿ. ಶೇಖರ್, ಕಬ್ಬನ್ ಪಾರ್ಕ್ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಇನ್‌ಸ್ಪೆಕ್ಟರ್ ಗಿರೀಶ್ ಮತ್ತು ಸಿಬ್ಬಂದಿ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ, ಸೂಕ್ತ ನಿರ್ವಹಣೆ ಸೇರಿದಂತೆ ಐದು ಕಾರಣ ನೀಡಿ ರಾಜ್ಯ ಸರ್ಕಾರ ಸಸ್ಪೆಂಡ್ ಮಾಡಿದೆ. ಆದರೆ, ವೇದಿಕೆ ಮೇಲೆ ಆರ್ ಸಿಬಿ ಆಟಗಾರರ ಜೊತೆ ಫೋಟೋ ತೆಗೆಸಿಕೊಳ್ಳಲು ಬಂದ ಸಚಿವರು, ಸಿಎಂ ಮೊಮ್ಮಗ ಸೇರಿದಂತೆ ಇತರರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಮೊದಲು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.