SUDDIKSHANA KANNADA NEWS/ DAVANAGERE/DATE:06_09_2025
ದಾವಣಗೆರೆ: ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ಮುದಹದಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುದಹದಡಿ ಗ್ರಾಮದ ಬಿ..ದಿಳ್ಯಪ್ಪ ಇಂದು ಮಧ್ಯಾಹ್ನ ದೈವಧೀನರಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: FD ಅಥವಾ ಮ್ಯೂಚುಯಲ್ ಫಂಡ್‌ಗಳ ಮೇಲೆ ಸಾಲ? ಮುಂದುವರಿಯುವ ಮೊದಲು ಈ 7 ಅಂಶಗಳನ್ನು ಪರಿಗಣಿಸಿ.
ಮೃತರ ಅಂತ್ಯಕ್ರಿಯೆಯನ್ನು ಭಾನುವಾರ ಮಧ್ಯಾಹ್ನ 12 ಗಂಟೆಗೆ ಮುದಹದಡಿ ಗ್ರಾಮದ ಜಮೀನಿನಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಿ.ದಿಳ್ಳೆಪ್ಪನವರ ನಿಧನಕ್ಕೆ ಎಸ್ಸೆಸ್-ಎಸ್ಸೆಸ್ಸೆಂ ಸಂತಾಪ:
ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಮುದಹದಡಿ ಗ್ರಾಮದ ಬಿ.ದಿಳ್ಳೆಪ್ಪ ಅವರ ನಿಧನಕ್ಕೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ನಿಧನದಿಂದ ಬಿ.ದಿಳ್ಳೆಪ್ಪ ಅವರ ಕುಟುಂಬ ವರ್ಗ ಹಾಗೂ ಕಾಂಗ್ರೆಸ್ ಪಕ್ಷದ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಅವರುಗಳು ಪ್ರಾರ್ಥಿಸಿದ್ದಾರೆ.