Site icon Kannada News-suddikshana

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ. ನಾಗೇಂದ್ರ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ.

ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಗೆ ಆಗಮಿಸಿದ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂದ ಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವಂತ ಎಸ್‌ಐಟಿ ಅಧಿಕಾರಿಗಳು ಎಂಡಿ ಹಾಗೂ ಸಚಿವರ ಆಪ್ತರು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Exit mobile version