Site icon Kannada News-suddikshana

ಮಾದಿಗ ಸಮುದಾಯದ ಬಗ್ಗೆಅವಹೇಳನಕಾರಿ ಹೇಳಿಕೆ: ಶಾಸಕ ಬಿ. ಪಿ. ಹರೀಶ್ ವಿರುದ್ಧದ ಸಮನ್ಸ್ ರದ್ದುಪಡಿಸಿದ ಹೈಕೋರ್ಟ್

B. P. Harish

SUDDIKSHANA KANNADA NEWS/ DAVANAGERE/DATE:21_08_2025

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಅವರು ಈಗ ನಿರಾಳ. ಹರಿಹರದಲ್ಲಿ ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಕುರಿತಂತೆ ಜಾತಿ ನಿಂದನೆ ಪ್ರಕರಣದಲ್ಲಿ ದಾವಣಗೆರೆ ಸೆಷನ್ಸ್ ನ್ಯಾಯಾಲಯವು ಬಿ. ಪಿ. ಹರೀಶ್ ವಿರುದ್ಧ ಸಮನ್ಸ್ ಹೊರಡಿಸಿತ್ತು. ಈ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

READ ALSO THIS STORY: ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆಗೆ ಶರಣು!

ಬಿ. ಪಿ. ಹರೀಶ್ ಅವರು ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಸಮನ್ಸ್ ಜಾರಿಗೊಳಿಸಿದ್ದ ದಾವಣಗೆರೆ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಹೊರಡಿಸಿದ್ದ ಆದೇಶ ರದ್ದುಪಡಿಸಿದೆ.

ಹರೀಶ್ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಪಿ. ದಳವಾಯಿ ಅವರು, ಕೋರ್ಟ್ ತನ್ನ ವಿವೇಚನೆ ಬಳಸಿ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಬಗ್ಗೆ ಹೊಸದಾಗಿ ಕ್ರಮ ಜರುಗಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದ ಬಿ. ಪಿ. ಹರೀಶ್ ಅವರನ್ನು ದಲಿತ ಸಮುದಾಯದ ಕೆಲ ಮುಖಂಡರು ಅಭಿನಂದಿಸಲು ತೆರಳಿದ್ದಾಗ ಈ ವೇಳೆ ಹರೀಶ್ ಅವರು ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನನಗೆ ಮತ ಹಾಕಿಲ್ಲ ಎಂದು ಆಕ್ಷೇಪಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಿ. ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಹರೀಶ್ ಅವರ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಎಫ್ ಐಆರ್ ದಾಖಲಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಆರೋಪಿಗೆ ಸಮನ್ಸ್ ನೀಡಿತ್ತು.

Exit mobile version