ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ, ಅಮಿತ್ ಶಾ ಬೆಂಗಳೂರಿಗೆ ಕರೆಯಿಸಿ ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ದೊಡ್ಡ ಸಮಾರಂಭ: ಬಿ. ಎಸ್. ಯಡಿಯೂರಪ್ಪ ಘೋಷಣೆ

On: November 15, 2023 5:44 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-11-2023

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರ ಆದರ್ಶ ಮತ್ತು ಆಶೀರ್ವಾದದಂತೆ ಬಿ. ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅಮಿತ್ ಶಾ ಅವರನ್ನು ಬೆಂಗಳೂರಿಗೆ ಕರೆಯಿಸಿ ಲಕ್ಷಾಂತರ ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಬೇಕೆಂಬ ಅಪೇಕ್ಷೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದರು.

ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ರಾಜಕೀಯ ನಾಯಕರು ಒಟ್ಟಾಗಿ ಸೇರಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದ ಮೇಲೆ ಅದ್ಧೂರಿ ಸ್ವಾಗತ, ಎಲ್ಲೆಡೆ ಉತ್ಸಾಹ ಕಂಡು ಬರುತ್ತಿದೆ. ಶುಭ ಸಮಾರಂಭದಲ್ಲಿ ನಮ್ಮೆಲ್ಲಾ ನಾಯಕರು ವಿಜಯೇಂದ್ರ ಅವರಿಗೆ ಆಶೀರ್ವಾದ ಮಾಡಿರುವುದು ಸಂತೋಷ ತಂದಿದೆ. ದೊಡ್ಡ ಸಂಖ್ಯೆಯಲ್ಲಿ ಬಂದಿರುವ ಪಕ್ಷದ ಹಿರಿಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕೆಲವರಿಗೆ ತೊಂದರೆಯಾಗಿದೆ. ಮಾಧ್ಯಮದವರಿಗೂ ಸಮಸ್ಯೆ ಆಗಿದೆ. ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬಿಜೆಪಿ ನಿರ್ಗಮಿತ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಜೆ. ಪಿ. ನಡ್ಡಾ ಅವರು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಶೀರ್ವಾದ ಮಾಡಿ ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ನಾವೆಲ್ಲರೂ ಶ್ರಮಿಸುತ್ತೇವೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ನಾನು ಕಿರಿಯನಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆದೆ. ಬಸವರಾಜ್ ಬೊಮ್ಮಾಯಿ, ಯಯೂರಪ್ಪ, ಗೋವಿಂದ ಕಾರಜೋಳ, ಕೆ. ಎಸ್. ಈಶ್ವರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯಾಧ್ಯಕ್ಷರಾಗಿದ್ದ ನನಗೆ ಸಹಕಾರ ನೀಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಓಡಾಡಿದ್ದೇನೆ ಎಂದರು.

ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದೇನೆ. ಅತಿ ಹೆಚ್ಚು ಪ್ರಕೋಷ್ಠಗಳನ್ನ ನಾವು ಮಾಡಿದ್ದೇವೆ. ಮತಗಟ್ಟೆ ಅಧ್ಯಕ್ಷನ ಮನೆಗೆ ಫಲಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ನನಗೆ ನೀಡಿದಂತೆ ಮಾರ್ಗದರ್ಶನ, ಸಹಕಾರ ನೀಡಿದಂತೆ ವಿಜಯೇಂದ್ರ ಅವರಿಗೂ ನೀಡಬೇಕು. ಸಾಮೂಹಿಕವಾಗಿ ಮುನ್ನಡೆಯುವ ಜವಾಬ್ದಾರಿ ವಿಜಯೇಂದ್ರ ಅವರ ಮೇಲಿದೆ ಎಂದು ತಿಳಿಸಿದರು.

ವಿಜಯೇಂದ್ರ ಸಂಘಟನೆ ಮಾಡಿದವರು, ಹೋರಾಟ ಮಾಡಿದವರು. ಅತ್ಯುತ್ತಮ ಸಂಘಟಕ. ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯ ಪ್ರವಾಸ ಮಾಡಿರುವ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿದ್ದಾರೆ. ಪ್ರತಿಯೊಂದು ಹಂತದಲ್ಲಿಯೂ ಜೊತೆಗಿರುತ್ತೇವೆ. ಸಹಕಾರ ನೀಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಗೆಲ್ಲಲು ಶ್ರಮಿಸೋಣ. ಮೋದಿ, ಅಮಿತ್ ಶಾ, ಜೆ. ಪಿ. ನಡ್ಡಾ ಅವರ ಆಶೀರ್ವಾದದಿಂದ ಕೆಲಸ ಮಾಡೋಣ. ಯಡಿಯೂರಪ್ಪರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿದ ತೃಪ್ತಿ ನನಗಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment