SUDDIKSHANA KANNADA NEWS/ DAVANAGERE/ DATE:01-10-2023
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕರೂ ಆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರ ಪರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ (B. S. Yediyurappa) ಬ್ಯಾಟ್ ಬೀಸಿದ್ದಾರೆ.
ಈ ಸುದ್ದಿಯನ್ನೂ ಓದಿ:
Davanagere: ನಮ್ಮವರಿಗೆ ಅನ್ಯಾಯವಾದ್ರೆ ಸುಮ್ಮನಿರಬೇಕಾ? ಸಿಡಿದೆದ್ದ ಶಾಮನೂರು ಶಿವಶಂಕರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತರೇ ಹೆಚ್ಚಿರುವುದು, ನಾನು ಯಾರಿಗೂ ಹೆದರಲ್ಲ: ಸಿಎಂಗೆ ಎಸ್ಎಸ್ ಟಾಂಗ್
ಮಾಧ್ಯಮವದರ ಜೊತೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪರಿಗೆ ವೀರಶೈವ ಲಿಂಗಾಯತ ಸಮಾಜದ ಪರ ಕಳಕಳಿ ಇದೆ. ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂಬ ಎಂಬ ಭಾವನೆ ವ್ಯಕ್ತಪಡಿಸಿರುವ ಶಾಮನೂರು ಶಿವಶಂಕರಪ್ಪರ ಹೇಳಿಕೆಗೆ ಬೆಂಬಲ ಇದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದ ದೊಡ್ಡದಿದೆ. ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಶಾಮನೂರು ಅವರ ಹೇಳಿಕೆ ಸರಿಯಾಗಿಯೇ ಇದೆ ಎಂಬುದು ನನ್ನ ಭಾವನೆ ಎಂದು
ತಿಳಿಸಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆಗೆ ಆಗಿರುವುದು ಎಲ್ಲರಿಗೂ ಗೊತ್ತಿದೆ. ಶಾಮನೂರು ಶಿವಶಂಕರಪ್ಪರು ಹೇಳಿರುವುದು ಸರಿಯಾಗಿಯೇ ಇದೆ. ಇದನ್ನು ನಾನೂ ಒಪ್ಪುತ್ತೇನೆ. ವೀರಶೈವ ಲಿಂಗಾಯತ
ಸಮುದಾಯವು ಒಟ್ಟಾದರೆ ಅನ್ಯಾಯ ಆಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.