ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಭಿನಯ ಸರಸ್ವತಿ ಬಿ. ಸರೋಜಾದೇವಿ ವಿಧಿವಶ: ಗಣ್ಯಾತಿಗಣ್ಯರ ಕಂಬನಿ

On: July 14, 2025 11:41 AM
Follow Us:
ಬಿ.ಸರೋಜಾದೇವಿ
---Advertisement---

SUDDIKSHANA KANNADA NEWS/ DAVANAGERE/ DATE:14_07_2025

ಬೆಂಗಳೂರು: ಕನ್ನಡದ ವರನಟ ಡಾ. ರಾಜ್ ಕುಮಾರ್, ಎಂ. ಜಿ. ರಾಮಚಂದ್ರರಾವ್, ಎನ್ ಟಿ ಆರ್ ಸೇರಿದಂತೆ ಖ್ಯಾತ ನಟರ ಜೊತೆ ನಟನೆ ಮಾಡಿದ್ದ ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ವಿಧಿವಶರಾಗಿದ್ದಾರೆ. 87 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಮಲ್ಲೇಶ್ವರಂನ ನಿವಾಸದಲ್ಲಿ ನಿಧನರಾದರು. ಆರು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ ಅಪ್ರತಿಮ ಕಲಾವಿದೆ. ದಕ್ಷಿಣ ಭಾರತದ ಅಗ್ರಗಣ್ಯ ನಾಯಕರೊಂದಿಗೆ ನಟನೆ ಮಾಡಿದ್ದ ಕೀರ್ತಿ ಅವರದ್ದು. ಡಾ. ರಾಜ್ ಕುಮಾರ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ತಮಿಳುನಾಡಿನ ಎಂಜಿಆರ್, ಅಕ್ಕಿನೇನಿ ನಾಗೇಶ್ವರರಾವ್ ಸೇರಿದಂತೆ ಹಲವು ಅಗ್ರ ನಟರ ಜೊತೆ ನಟಿಸಿ ಸೈ ಎನಿಸಿಕೊಂಡವರು.

1969ರಲ್ಲಿ ಪದ್ಮಶ್ರೀ ಪ್ರಶಸ್ತಿ, ಕಲೈಮಾಮಣಿ ಜೀವಮಾನ ಸಾಧನೆ, ರಾಜ್ ಕುಮಾರ್ ಜೀವಮಾನ ಸಾಧನೆ, ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಹುಭಾಷಾ ನಟಿ ಪಡೆದಿದ್ದರು. ಸಿನಿಮಾ ಕ್ಷೇತ್ರದಲ್ಲಿ ಅತ್ಯಮೂಲ್ಯ ಸಾಧನೆ ಮಾಡಿದ ಕಲಾವಿದೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. “ಅಭಿನಯ ಸರಸ್ವತಿ” ಎಂದೇ ಖ್ಯಾತರಾಗಿ ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಅನೇಕ ಪೌರಾಣಿಕ ಮತ್ತು ಐತಿಹಾಸಿ ಚಿತ್ರಗಳಲ್ಲಿ ನಟಿಸಿದ್ದ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಅವರು ಕಿತ್ತೂರು ಚೆನ್ನಮ್ಮನ ಪಾತ್ರದಲ್ಲಿ ನಟಿಸಿರುವುದು ಇನ್ನೂ ಎಲ್ಲರ ಮನದಲ್ಲಿ ಅಚ್ಚಳಿಯದೇ ಉಳಿದಿದೆ ಎಂದಿದ್ದಾರೆ.

ಅವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಅರಸಿ ಬಂದಿದ್ದವು. ಬಿ. ಸರೋಜಾದೇವಿ ನಿಧನದಿಂದ ಕನ್ನಡ ಚಿತ್ರರಂಗ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ನಟ ಉಪೇಂದ್ರ, ಜಗ್ಗೇಶ್ ಸೇರಿದಂತೆ ಖ್ಯಾತನಾಮರು, ತೆಲುಗು, ತಮಿಳು, ಹಿಂದಿ ಹಾಗೂ ಕನ್ನಡ ಭಾಷೆಯ ಖ್ಯಾತ ನಟರು ಸಂತಾಪ ಸೂಚಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment