SUDDIKSHANA KANNADA NEWS/ DAVANAGERE/ DATE:25-05-2024
ದಾವಣಗೆರೆ: ಶಿಕ್ಷಕರು, ಪದವೀಧರರ ಸಮಸ್ಯೆಗಳಿಗೆ ಎನ್.ಡಿ.ಎ ಅಭ್ಯರ್ಥಿಗಳ ಗೆಲುವೇ ಪರಿಹಾರ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ದಾವಣಗೆರೆಯ ಶಿರಮಗೊಂಡನಹಳ್ಳಿಯಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು, ಪದವೀಧರರ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಕಾಳಜಿ ವಹಿಸಿ, ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳ ಸುಧಾರಣೆ ಹಾಗೂ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಎಂದಿನಂತೆ
ಈ ಬಾರಿಯೂ ಸಹ ಸಂಪೂರ್ಣ ಬೆಂಬಲ ನೀಡಿ ಎಂದು ಮನವಿ ಮಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೈ. ಎ. ನಾರಾಯಣಸ್ವಾಮಿ ಅವರಿಗೆ ತಮ್ಮ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯತದ ಮತವನ್ನು ನೀಡಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ಈಗಾಗಲೇ ಜನರು ಬೇಸತ್ತಿದ್ದಾರೆ. ಕೇವಲ ಗ್ಯಾರಂಟಿ ಹೆಸರು ಹೇಳಿಕೊಂಡು ಅಧಿಕಾರ ನಡೆಸುತ್ತಿರುವ ರಾಜ್ಯ ಸರ್ಕಾರವು ಕರ್ನಾಟಕ ದಿವಾಳಿಯಾಗುವಂತೆ ಮಾಡಿದೆ. ಇದುವರೆಗೆ ಶಿಕ್ಷಕರ,
ಪದವೀಧರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಬಿಜೆಪಿ – ಜೆಡಿಎಸ್ ಅಭ್ಯರ್ಥಿಗಳ ಗೆಲುವೊಂದೇ ಸಮಸ್ಯೆಗಳಿಗೆ ಪರಿಹಾರ ಎಂದು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಾ. ಜಿ.ಎಂ.ಸಿದ್ದೇಶ್ವರ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್,
ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರಾದ ಶಿವಯೋಗಿ ಸ್ವಾಮಿ, ಜಿಲ್ಲಾಧ್ಯಕ್ಷ ರಾಜಶೇಖರ್, ಶಾಸಕ ಬಿ. ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ನವೀನ್, ಎಂ.ಚಿದಾನಂದಗೌಡ, ಮಾಜಿ ಶಾಸಕರಾದ ಅರುಣ್ ಶಹಾಪುರ, ಹೆಚ್.ಪಿ ರಾಜೇಶ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮುಖಂಡರಾದ ಲೋಕಿಕೆರೆ ನಾಗರಾಜ್, ಶಿವಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಶಿಕ್ಷಕ ಮತದಾರರು ಉಪಸ್ಥಿತರಿದ್ದರು.
ಮತಯಾಚನೆ:
ದಾವಣಗೆರೆಯ ವಿಶ್ವ ಚೇತನ ಶಿಕ್ಷಣ ಸಂಸ್ಥೆ ಮತ್ತು ಸಿದ್ದಗಂಗಾ ಕಾಲೇಜಿನಲ್ಲಿ ಶಿಕ್ಷಕರನ್ನು ಭೇಟಿಯಾಗಿ ಎನ್.ಡಿ.ಎ)ಅಭ್ಯರ್ಥಿ ವೈ. ಎ. ನಾರಾಯಣಸ್ವಾಮಿ ಅವರ ಪರವಾಗಿ ಬಿ. ವೈ. ವಿಜಯೇಂದ್ರ ಮತಯಾಚನೆ ಮಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ನಮ್ಮ ಅಭ್ಯರ್ಥಿಗೆ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯತದ ಮತಗಳನ್ನು ನೀಡಿ ಆಶೀರ್ವದಿಸುವಂತೆ ಶಿಕ್ಷಕರು, ಪದವೀಧರರಲ್ಲಿ ಮನವಿ ಮಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ನಮ್ಮ ಅಭ್ಯರ್ಥಿಗೆ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯತದ ಮತಗಳನ್ನು ನೀಡಿ ಆಶೀರ್ವಾದ ಮಾಡಬೇಕೆಂಬ ಮನವಿ ಮಾಡಿದರು.
ಈ ವೇಳೆ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಾ. ಜಿ. ಎಂ.ಸಿದ್ದೇಶ್ವರ್, ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ನವೀನ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ಮುಖಂಡರಾದ ಯಶವಂತ ರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪಕ್ಷದ ಮುಖಂಡರು, ಶಿಕ್ಷಕ ಮತದಾರರು ಭಾಗವಹಿಸಿದ್ದರು.