SUDDIKSHANA KANNADA NEWS/ DAVANAGERE/ DATE:12-03-2025
ಬೆಂಗಳೂರು: “ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವಂತೆ ರಾಜ್ಯಪಾಲರಿಗೆ ಮನವಿ” ಸಲ್ಲಿಸಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರುಗಳ ನಿಯೋಗದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು.
ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ರಾಜ್ಯದ ಜನರ ತೆರಿಗೆ ಹಣದ ದುರುಪಯೋಗವಾಗಲಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆ ಎಂಬುದನ್ನು ಗೌರವಾನ್ವಿತ ರಾಜ್ಯಪಾಲರ ಗಮನಕ್ಕೆ ತರಲಾಯಿತು ಎಂದು ಮಾಹಿತಿ ನೀಡಿದರು.
ಈ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ನ ನಾಯಕ ಭೋಜೇಗೌಡ, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.