SUDDIKSHANA KANNADA NEWS/ DAVANAGERE/DATE:23_09_2025
ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರು ಅನ್ನ ಭಾಗ್ಯ ‘ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ, ಪ್ರಧಾನಿ ನರೇಂದ್ರ ಮೋದಿಜೀ ಅವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲ ‘ಗರೀಬ್ ಕಲ್ಯಾಣ್’ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಪಸರಿಸಿದ ಬಡವರ “ಸ್ವಾಭಿಮಾನದ ಭಾಗ್ಯ” ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ.
READ ALSO THIS STORY: ಜೋಗತಿಯಮ್ಮನ ಸೀರೆ ಜೊತೆ ಹೋಗಿತ್ತು ಚಿನ್ನದ ಒಡವೆ: ಮರಳಿ ಸಿಕ್ಕಿದ್ದೇ ರೋಚಕ!
ನಿಮ್ಮ ಕಲ್ಪನೆಯಲ್ಲಿ “ಅನ್ನಭಾಗ್ಯ ಜನರಿಗೆ ನೀಡುವ ಭಿಕ್ಷೆ ಎಂದು ಭಾವಿಸಿದಂತಿದೆ, ಅದು ಭಿಕ್ಷೆಯಲ್ಲ ಜನರ ಹಕ್ಕು” ಎಂಬ ಪರಿಜ್ಞಾನ ನಿಮಗಿರಲಿ, ಈ ಹಕ್ಕು ಪಡೆಯಲು ನಿಮ್ಮ ಮನೆಯ ಕೆಲಸಗಾರನಿಂದಿಡಿದು ದೇಶದ ಕಟ್ಟ ಕಡೆಯ ಪ್ರಜೆಗೂ ದಕ್ಕುವ ಸಂವಿಧಾನದ ಸೌಭಾಗ್ಯ. ತ್ರಿವಿಧ ದಾಸೋಹದ ಈ ನಾಡಿನಲ್ಲಿ ಅನ್ನಭಾಗ್ಯದ ಹೆಸರಿನಲ್ಲಿ ಬಡವರನ್ನು ಹಂಗಿಸುವ ಮೂಲಕ ಚಾಲನೆ ವೃತ್ತಿ ಆರಿಸಿಕೊಂಡಿರುವ ಶ್ರಮಿಕ ಚಾಲಕ ಸಮೂಹವನ್ನು ನೀವು ಅವಮಾನಿಸಿದ್ದೀರಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮಕ್ಕಳು‘ಅಕ್ಷರಭಾಗ್ಯ’ಪಡೆಯುವಲ್ಲಿ ನಿತ್ಯ ಬವಣೆ ಅನುಭವಿಸುತ್ತಿದ್ದಾರೆ, ಮೊದಲು ಅದರತ್ತ ಗಮನ ಕೊಡಿ, ಸಾವಿರಾರು ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳಿಲ್ಲದೇ ನಲುಗುತ್ತಿವೆ, ಕಟ್ಟಡಗಳ ಮೇಲ್ಛಾವಣಿ ಕುಸಿದು ಅವಘಡಗಳು ಸಂಭವಿಸುತ್ತಿವೆ, ಇಂದಿಗೂ ಅದೆಷ್ಟೋ ಶಾಲೆಗಳಲ್ಲಿ ಶೌಚಾಲಯಗಳಿಲ್ಲದೆ ಮಕ್ಕಳು ಮುಜುಗರ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಮೊದಲು ಊರು ಸುತ್ತಿಬನ್ನಿ, ಹಳ್ಳಿಗಾಡಿನ ಶಾಲೆಗಳ ಸ್ಥಿತಿ ನೋಡಿ ಬನ್ನಿ, ಅಗತ್ಯ ಶಿಕ್ಷಕರಿಲ್ಲದೇ ಮಕ್ಕಳು ಅಕ್ಷರ ವಂಚಿತರಾಗುತ್ತಿರುವ ಬಗ್ಗೆ ನಿತ್ಯ ವರದಿಯಾಗುತ್ತಿದೆ ‘ವಿದ್ಯಾಭಾಗ್ಯ’ಕ್ಕೆ ಆಗುತ್ತಿರುವ ಕಂಟಕವನ್ನು ತಪ್ಪಿಸುವ ಸಾಮರ್ಥ್ಯವಿಲ್ಲದ ನೀವು ‘ಅನ್ನ ಭಾಗ್ಯ’ದ ಹೆಸರಿನಲ್ಲಿ ಬಡವರನ್ನು ಅವಮಾನಿಸಲು ಲಜ್ಜೆಗೇಡಿತನದ ವರ್ತನೆ ಪ್ರದರ್ಶಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಚಿವ ಸ್ಥಾನದ ಸಜ್ಜನಿಕೆ ಬಿಟ್ಟು ಮಾತನಾಡುವ ನಿಮ್ಮಿಂದ “ಶಿಕ್ಷಣ ಇಲಾಖೆಯನ್ನು ದೇವರೇ ಕಾಪಾಡಬೇಕಾದ ಸ್ಥಿತಿ ಬಂದೊದಗಿರುವುದು ಈ ನಾಡಿನ ದೌರ್ಭಾಗ್ಯವಾಗಿದೆ” ಎಂದು ಹೇಳಿದ್ದಾರೆ.