Site icon Kannada News-suddikshana

ಗಣೇಶ ಹಬ್ಬಕ್ಕೆ ಈ ವಿಧಾನಗಳ ಅನುಸರಿಸಬೇಕು: ದಾವಣಗೆರೆ ಜಿಲ್ಲಾಡಳಿತ ಕಟ್ಟಪ್ಪಣೆ!

ದಾವಣಗೆರೆ

ದಾವಣಗೆರೆ: ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯಗೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ
ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳ ಬಳಕೆ ನಿಷೇಧಿಸಲಾಗಿದೆ.

READ ALSO THIS STORY: ಸ್ವಯಂ ಉದ್ಯೋಗ, ನೇರಸಾಲ, ಜಮೀನು ಖರೀದಿ ಸೇರಿ ವಿವಿಧ ನಿಗಮಗಳಲ್ಲಿ ಅರ್ಜಿ ಆಹ್ವಾನ: ಸೌಲಭ್ಯಕ್ಕೆ ಬೇಕು ಈ ದಾಖಲೆಗಳು!

ಅದೇ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಇತರೆ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ಅವುಗಳನ್ನು ಮೇಲೆ ತಿಳಿಸಿದ ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅನುಸರಿಸ ಬೇಕಾದ ವಿಧಾನಗಳು:

ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿಗಳ ವಿಸರ್ಜನೆಯಿಂದಾಗಿ ಜಲಮೂಲಗಳು ಕಲುಷಿತವಾಗುತ್ತಿದ್ದು, ಅದರಂತೆ ಯಾವುದೇ ರಾಸಾಯನಿಕ ಬಣ್ಣ ಸಹಿತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ. ಹಾಗೂ ಅವುಗಳ ತಯಾರಿಕೆ, ಸಾಗಾಣಿಕೆ, ಮಾರಾಟ ಸಹ ಮಾಡಬಾರದು. ತಪ್ಪಿದ್ದಲ್ಲಿ, ಜಲಮಾಲಿನ್ಯ ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸದೆ, ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಖರೀದಿಸಿ ಪರಿಸರಯುಕ್ತ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಿಸಬೇಕೆಂದು ಅವರು ತಿಳಿಸಿದ್ದಾರೆ.

Exit mobile version