ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ಮಾರಾಟ ನಿಷೇಧ: ತಪ್ಪಿದ್ದಲ್ಲಿ 10 ಸಾವಿರ ರೂ. ಫೈನ್

On: July 24, 2025 11:43 AM
Follow Us:
ಗಣೇಶ
---Advertisement---

SUDDIKSHANA KANNADA NEWS/ DAVANAGERE/ DATE:24_07_2025

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

READ ALSO THIS STORY: ಕಡೂರಿನಲ್ಲಿ ಅಪಘಾತ: ದಾವಣಗೆರೆಯ ರಿಯಲ್ ಎಸ್ಟೇಟ್ ಉದ್ಯಮಿ ಪ್ರತಾಪ್ ಪವಾರ್ ದಾರುಣ ಸಾವು

ಮಾರಾಟ ಮಾಡಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು. ರೂ.10.000-ಗಳ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪರಿಸರಕ್ಕೆ ಹಾನಿ ಮತ್ತು ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿರುವಂತಹ ಏಕ ಪ್ಲಾಸ್ಟಿಕ್ ಬಳಕೆಯ ವಸ್ತುಗಳನ್ನು ನಿಷೇಧಿಸಲಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕಂಡುಬಂದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟ ಮೊದಲನೇ ಅಪರಾಧಕ್ಕೆ ರೂ.500 ದಂಡ, 2ನೇ ಅಪರಾಧಕ್ಕೆ ರೂ.1000 ದಂಡ, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ದಾಸ್ತಾನು 1 ಕೆಜಿ ರೂ.500 ರಿಂದ 1000 ರೂಗಳವರೆಗೆ, 10 ಕೆಜಿ ರೂ.2000 ರಿಂದ 5000 ರೂಳವರೆಗೆ , 50 ಕೆಜಿ ರೂ.5000 ರಿಂದ 10000 ರೂಳವರೆಗೆ, 100 ಕೆಜಿಗೆ ರೂ.40 ರಿಂದ 50 ಸಾವಿರ ರೂ ದಂಡ ವಿಧಿಸಲಾಗುತ್ತದೆ. ಉದ್ದಿಮೆ ಪರವಾನಗಿ ರದ್ದುಗೊಳಿಸಲಾಗುವುದು.

ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಬಳಕೆ ಸಾರ್ವಜನಿಕರು ಅಥವಾ ಉದ್ದಿಮೆದಾರರು ಮೊದಲನೇ ಅಪರಾಧಕ್ಕೆ 20, ಎರಡನೇ ಅಪರಾಧಕ್ಕೆ 50 ಮೂರನೇ ಅಪರಾದಕ್ಕೆ 75 ಇರುತ್ತದೆ ಎಂದು ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment