ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳಿಸುವ ಘಟನೆಯೆಂದು ನಡೆದಿದೆ. ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಲ ತಂದೆಯಿಂದ ಈ ದುರಂತ ನಡೆದಿದೆ. ಸುಮಾರು 14 ವರ್ಷ ಮತ್ತು 15 ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಆರೋಪಿ ಪರಾರಿಯಾಗಿದ್ದಾನೆ. ಉತ್ತರ ಭಾರತ ಮೂಲದ ವ್ಯಕ್ತಿ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ದಾಸರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.