Site icon Kannada News-suddikshana

ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿನಲ್ಲಿ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ..!

ಬೆಂಗಳೂರು :ಪರಪ್ಪನ ಅಗ್ರಹಾರದಲ್ಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

ಕೈದಿಯ ಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ.

ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವಂತಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ ಎಂಬ ಮಾಹಿತಿ ಇದೆ.

 

Exit mobile version