Site icon Kannada News-suddikshana

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಗಣೇಶ ಹಬ್ಬದ ಸಂಭ್ರಮ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಗಣೇಶ ಹಬ್ಬ ಆಚರಿಸಲಾಯಿತು. ಪತ್ನಿ ಚೆನ್ನಮ್ಮ ಜೊತೆ ಸೇರಿ ದೇವೇಗೌಡರು, ಗಣೇಶನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ದೇವೇಗೌಡರ ಪುತ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರ ನಿವಾಸದಲ್ಲೂ ಗಣೇಶ ಚತುರ್ಥಿ ಆಚರಿಸಲಾಯಿತು. ಬಿಡದಿಯ ತೋಟದ ಮನೆಯಲ್ಲಿ ಗಣೇಶ ಹಬ್ಬವನ್ನು ಹೆಚ್‌ಡಿಕೆ ಆಚರಿಸಿದರು. ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಡಿನೆಲ್ಲೆಡೆ ಗಣೇಶ ಹಬ್ಬ ಸಂಭ್ರಮದ ವಾತಾವರಣ ಇದೆ. ಸಂಭ್ರಮ ಸಡಗರದಿಂದ ಹಬ್ಬವನ್ನು ಆಚರಿಸಲಾಗುತ್ತಿದೆ. ದೇವಾಲಯಗಳು ಜನರಿಂದ ತುಂಬಿ ತುಳುಕುತ್ತಿವೆ. ಗಣೇಶನನ್ನು ವಿವಿಧ ರೀತಿಯಲ್ಲಿ ಅಲಂಕೃತಗೊಳಿಸಿ ಪೂಜಿಸಲಾಗುತ್ತಿದೆ. ಅನೇಕ ರೀತಿಯ ಸಿಹಿತಿಂಡಿಗಳನ್ನು ಮಾಡಿ ದೇವರಿಗೆ ಭಕ್ತರು ಸಮರ್ಪಿಸುತ್ತಿದ್ದಾರೆ. ವಿಶೇಷ ಪೂಜೆ ಪುನಸ್ಕಾರಗಳನ್ನು ಸಲ್ಲಿಸುತ್ತಾರೆ. ಸಂಗೀತ, ನಾಟಕ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಹಬ್ಬದ ಹಿನ್ನೆಲೆ ಹೂ, ಹಣ್ಣುಗಳ ದರ ಏರಿಕೆಯಾಗಿದೆ. ಈ ಬಾರಿ ಅನೇಕರು ಪರಿಸರ ಪ್ರೇಮಿಗಳು ಗಣೆಶನ ಮೊರೆ ಹೋಗಿದ್ದಾರೆ. ವಿಘ್ನನಿವಾರಕನನ್ನು ಪೂಜಿಸಿದರೆ ಎಲ್ಲ ವಿಘ್ನಗಳು ದೂರ ಆಗುತ್ತದೆ ಎಂಬುದು ಎಲ್ಲರ ನಂಬಿಕೆಯಾಗಿದೆ.

Exit mobile version