SUDDIKSHANA KANNADA NEWS/ DAVANAGERE/ DATE:23-10-2023
ಬೆಂಗಳೂರು (Bangalore): ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
Read Also This Story:
Bangalore: ಬಿಗ್ ಬಾಸ್ ವರ್ತೂರು ಸಂತೋಷ್ ಗೆ ಬಿಗ್ ಶಾಕ್: ಅರಣ್ಯಾಧಿಕಾರಿಗಳು ಸಂತೋಷ್ ಬಂಧಿಸಿದ್ಯಾಕೆ…?
ಅವರು ಇಂದು ಬೆಂಗಳೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.
ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.
ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸರ್ಕಾರ ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.
ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.
ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಟೀಕೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದು ತಿಳಿಸಿದರು.