SUDDIKSHANA KANNADA NEWS/ DAVANAGERE/ DATE:06-10-2023
ಬೆಂಗಳೂರು (Bangalore): ಅಖಿಲ ಭಾರತೀಯ ವೀರಶೈವ ಲಿಂಗಾಯ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆರೋಪ ಮಾಡಿದ್ದರೆ, ಅವರ ಪುತ್ರರೂ ಆದ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಯಾರಿಗೂ ಅನ್ಯಾಯ ಆಗಿಲ್ಲ ಎಂದು ಹೇಳಿದ್ದಾರೆ.
Read Also This Story:
ಶಾಮನೂರು ಶಿವಶಂಕರಪ್ಪ (Shamanuru Shivashankarappa) ಸರ್ಕಾರ ಉರುಳಿಸುವ ಮಾತನಾಡಿದ್ದಾರೆ, ಕಾಂಗ್ರೆಸ್ ಸರ್ಕಾರಕ್ಕೆ ಅಪಾಯ ಗ್ಯಾರಂಟಿ: ಬಿಜೆಪಿ ಟ್ವೀಟ್ ನಲ್ಲಿ ಕುಟುಕು…!
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಂದು ವೇಳೆ ಯಾರಿಗಾದರೂ ಅನ್ಯಾಯವಾಗಿದ್ದರೆ ಸರಿಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆಗಳೂ ಪರಿಹಾರವಾಗಿವೆ.
ಏನೇ ಇದ್ದರೂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದು ಹೇಳಿದರು.
ದಾವಣಗೆರೆ ಜಿಲ್ಲಾಧಿಕಾರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಸಮಾಧಾನ ಇಲ್ಲ. ಈಗ ಜಿಲ್ಲಾಧಿಕಾರಿ ಇದ್ದಾರಲ್ವಾ. ಈ ಹಿಂದಿನದ್ದು, ಮತ್ತೆ ಯಾವಾಗ ಆಗಿದ್ದನ್ನು ಈಗ ಹೇಳಬೇಡಿ. ಯಾವ ಸಮಸ್ಯೆಯೂ ಇಲ್ಲ ಎಂದು
ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರು ಹಿರಿಯ ನಾಯಕರಿದ್ದಾರೆ. ಇಬ್ಬರು ಕುಳಿತು ಮಾತನಾಡುತ್ತಾರೆ. ಈಗ ಮುಗಿದ ಅಧ್ಯಾಯ. ಎಲ್ಲವೂ ಸರಿ ಹೋಗಿದೆ. ನಾವೆಲ್ಲರೂ ಸೇರಿಕೊಂಡೇ ಸಿದ್ದರಾಮಯ್ಯ
ಅವರನ್ನು ಸಿಎಂ ಮಾಡಿದ್ದೇವೆ. ಅವರೇ ಮಾತನಾಡುತ್ತಾರೆ. ಯಾವುದೇ ಅಸಮಾಧಾನ, ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.