Site icon Kannada News-suddikshana

Siddaramaiah: ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆ ಜಾತಿ ನೋಡಿ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

CM SIDDARAMAI

CM SIDDARAMAI

SUDDIKSHANA KANNADA NEWS/ DAVANAGERE/ DATE:01-10-2023

ಬೆಂಗಳೂರು: ನಮ್ಮದು ಜಾತ್ಯಾತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲಾ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

Read Also This Story:

Davanagere: ನಮ್ಮವರಿಗೆ ಅನ್ಯಾಯವಾದ್ರೆ ಸುಮ್ಮನಿರಬೇಕಾ? ಸಿಡಿದೆದ್ದ ಶಾಮನೂರು ಶಿವಶಂಕರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತರೇ ಹೆಚ್ಚಿರುವುದು, ನಾನು ಯಾರಿಗೂ ಹೆದರಲ್ಲ: ಸಿಎಂಗೆ ಎಸ್ಎಸ್ ಟಾಂಗ್

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಹೇಳಿರುವ ಬಗ್ಗೆ ಮಾತನಾಡಿ ಈ ರೀತಿ ಪ್ರತಿಕ್ರಿಯಿಸಿದರು.

ಹೆಚ್ ಡಿಕೆ ಹತಾಶೆ:

ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

 

Exit mobile version