SUDDIKSHANA KANNADA NEWS/ DAVANAGERE/ DATE:15-09-2023
ಬೆಂಗಳೂರು (Bangalore): ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಸಿಸಿಬಿ ಪೊಲೀಸರು ವಿಚಾರಣೆಗೆ ವಶಕ್ಕೆ ಪಡದಿದ್ದರು. ನಿನ್ನೆ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಕಚೇರಿಗೆ ಕರೆದುಕೊಂಡು ಬರುವ ವೇಳೆಯಲ್ಲಿ ಕುಸಿದು ಬಿದ್ದಿದ್ದಾರೆ.
ಈ ಸುದ್ದಿಯನ್ನೂ ಓದಿ:
ಕುಸಿಯುತ್ತಲೇ ಇದೆ ಭದ್ರಾ ಡ್ಯಾಂ (Bhadra Dam)ನೀರಿನ ಮಟ್ಟ: ಅಡಿಕೆ ಬೆಳೆಗಾರರಲ್ಲಿ ಆತಂಕಕ್ಕೆ ಕಾರಣವೇನು ಗೊತ್ತಾ…?
ಈ ವೇಳೆ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು, ಬಾಯಿಯಲ್ಲಿ ನೊರೆ ಬರುತ್ತಿತ್ತು. ಚೈತ್ರಾ ಕುಂದಾಪುರ ಪಿಡ್ಸ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದಿರಾ ಕ್ಯಾಂಟೀನ್ ಬಿಲ್ ಪಾವತಿ ಮಾಡಲು ಷಡ್ಯಂತ್ರ ಮಾಡಲಾಗಿದೆ. ಅಭಿನವ
ಹಾಲಶ್ರೀ ಸ್ವಾಮೀಜಿ ಬಂಧನವಾದರೆ ಎಲ್ಲಾ ಸತ್ಯ ಹೊರಗೆ ಬರುತ್ತದೆ. ಅದೇ ರೀತಿಯಲ್ಲಿ ದೊಡ್ಡವರು ಸಿಕ್ಕಿ ಬೀಳುತ್ತಾರೆ. ಇದರ ಹಿಂದೆ ಯಾರ್ಯಾರಿದ್ದಾರೆ ಎಂಬುದು ಗೊತ್ತಾಗಲಿದೆ. ನಾನು ತಪ್ಪು ಮಾಡಿಲ್ಲ ಎಂದಷ್ಟೇ ನಿನ್ನೆ ಚೈತ್ರಾ ಕುಂದಾಪುರ ಹೇಳಿದ್ದರು. ಇದು ರಾಜಕೀಯ ವಲಯದಲ್ಲಿ ಬಹಳ ಚರ್ಚೆಯಾಗಿತ್ತು.
ಸ್ಫೋಟಕ ಹೇಳಿಕೆ ಕೊಟ್ಟ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳು ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದರು. ತನಿಖೆ ಚುರುಕುಗೊಳಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿಸಲು ನಿರ್ಧರಿಸಿದ್ದರು. ಆದ್ರೆ, ನಿನ್ನೆ ಜೋರಾಗಿಯೇ ಮಾತನಾಡಿದ್ದ ಚೈತ್ರಾ ಕುಂದಾಪುರ ಇಂದು ಅಸ್ವಸ್ಥಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಪರ ಉಗ್ರ ಭಾಷಣಕಾರಿ ಚೈತ್ರಾ ಕುಂದಾಪುರ ಉದ್ಯಮಿ ಗೋಪಾಲ್ ಬಾಬು ಪೂಜಾರಿ ಅವರಿಗೆ ಬೈಂದೂರು ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಮೋಸ ಮಾಡಿದ್ದ ಆರೋಪ ಎದುರಿಸುತ್ತಿದ್ದಾರೆ. ಚೈತ್ರಾ ಕುಂದಾಪುರ ಜೊತೆ ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ಚೈತ್ರಾ ಕುಂದಾಪುರ ಅವರು ಇಂದಿರಾ ಕ್ಯಾಂಟೀನ್ ನ ಬಾಕಿ ಇದ್ದ 35 ಕೋಟಿ ರೂಪಾಯಿ ಗೋಪಾಲ್ ಪೂಜಾರಿಗೆ ಬರಬೇಕಿತ್ತು. ಈ ಹಣಕ್ಕಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಾನೇನೂ ತಪ್ಪು ಮಾಡಿಲ್ಲ. ಶ್ರೀಗಳ ಬಂಧನವಾಗಲಿ. ಆಮೇಲೆ ಎಲ್ಲವೂ ಹೊರಗೆ ಬರಲಿದೆ ಎಂದು ಚೈತ್ರಾ ಕುಂದಾಪುರ ಹೇಳಿದ್ದರು.