Site icon Kannada News-suddikshana

ಕನ್ನಡಿಗರಿಗೆ ಭರ್ಜರಿ ಗುಡ್‌ ನ್ಯೂಸ್‌ : ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ

ಬೆಂಗಳೂರು : ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗ ಕನ್ನಡಿಗರಿಗೆ ಸಿಗಬೇಕು, ಕರ್ನಾಟಕದ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಹುತೇಕ ಖಾಸಗಿ ಕಂಪೆನಿಗಳು ಅನ್ಯ ಭಾಷಿಕರಿಗೆ ಹೆಚ್ಚಿನ ಉದ್ಯೋಗಗಳನ್ನು ನೀಡುತ್ತಿರುವುದನ್ನು ಮನಗಂಡ ನಮ್ಮ ಸರ್ಕಾರ ಸಚಿವ Santosh Lad ಅವರ ಮುತುವರ್ಜಿಯಲ್ಲಿ ಖಾಸಗಿ ಕಂಪೆನಿಗಳ ಉದ್ಯೋಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿದೇಯಕವನ್ನು ಸಂಪುಟ ಅಂಗೀಕರಿಸಿದೆ.

ಇದರಿಂದಾಗಿ ಖಾಸಗಿ ಕಂಪೆನಿಗಳು ಮ್ಯಾನೇಜ್ಮೆಂಟ್ ಹುದ್ದೆಗಳಲ್ಲಿ 50% , ನಾನ್ ಮ್ಯಾನೇಜ್ಮೆಂಟ್ ಹುದ್ದೆಗಳಲ್ಲಿ 75% ಹಾಗೂ ಸಿ & ಡಿ ದರ್ಜೆಯ ಹುದ್ದೆಗಳಲ್ಲಿ 100% ಮೀಸಲಾತಿಯನ್ನು ಕನ್ನಡಿಗರಿಗೆ ಮೀಸಲಿರಿಸಬೇಕಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.

ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವದಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Exit mobile version